×
Ad

ಬೆಂಗಳೂರು: ಯುವಕನಿಗೆ ಚಾಕು ಇರಿತ

Update: 2017-09-24 18:38 IST

ಬೆಂಗಳೂರು, ಸೆ.24: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿರುವ ಘಟನೆ ಆನೇಕಲ್‌ನ ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಾಕು ಇರಿತದಿಂದ ಗಾಯಗೊಂಡಿರುವ ಮೇಡಹಳ್ಳಿಯ ಅನಿಲ್(24) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೇಡಹಳ್ಳಿಯ ಹರೀಶ್ ಹಾಗೂ ಅಂಜನ್ ಎಂಬವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಹರೀಶ್ ತಾಲೂಕಿನ ಜೆಡಿಎಸ್ ಮುಖಂಡನಾಗಿದ್ದು, ಮಾಯಸಂದ್ರ ಗ್ರಾಮ ಪಂಚಾಯತ್ ಸದಸ್ಯನಾಗಿದ್ದಾರೆ. ಅನಿಲ್ ತನ್ನ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ ಹರೀಶ್ ಬೆದರಿಕೆ ಹಾಕಿ ತನ್ನ ಸ್ನೇಹಿತ ಅಂಜನ್ ಜತೆ ಸೇರಿ ಅನಿಲ್‌ ನೊಂದಿಗೆ ಜಗಳ ತೆಗೆದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಮೊಕದ್ದಮೆ ದಾಖಲಿಸಿಕೊಂಡಿರುವ ಅತ್ತಿಬೆಲೆ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News