ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

Update: 2017-09-24 15:15 GMT

ಬೆಂಗಳೂರು, ಸೆ.24: ಪಕ್ಕದ ಮನೆಯ 12 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ಯಾಚಾರ ಎಸಗಿದ ಆರೋಪಿಯನ್ನು ವ್ಯಾನ್ ಚಾಲಕ ಅನಂತಪುರ ಮೂಲದ ಗಿರೀಶ್(25) ಎಂದು ಗುರುತಿಸಲಾಗಿದೆ.

ಐದನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪಕ್ಕದ ಮನೆಯ ಬಾಲಕಿಯನ್ನು ಗಿರೀಶ್ ಪರಿಚಯ ಮಾಡಿಕೊಂಡಿದ್ದ. ಆಗಾಗ ಚಾಕ್‌ಲೆಟ್, ಇನ್ನಿತರ ಸಿಹಿ ತಿನಿಸುಗಳನ್ನು ಕೊಡಿಸಿ ಸಲುಗೆ ಬೆಳೆಸಿಕೊಂಡಿದ್ದ ಎಂದು ಹೇಳಲಾಗಿದೆ.

ಆರೋಪಿ ಸೆ.19ರಂದು ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದಾಗ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಕೆಲಸ ಮುಗಿಸಿಕೊಂಡು ಬಂದ ತಂದೆ ತಾಯಿಗಳು, ಮಂಕಾಗಿದ್ದ ಬಾಲಕಿಯನ್ನು ವಿಚಾರಿಸಿದಾಗ ಕೃತ್ಯವನ್ನು ತಿಳಿಸಿದ್ದು, ಕೂಡಲೇ ಯಲಹಂಕ ಉಪನಗರ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡ ಯಲಹಂಕ ಉಪ ನಗರ ಠಾಣಾ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News