×
Ad

ನ್ಯಾಯ ಒದಗಿಸುವಂತೆ ಪ್ರಧಾನಿಗೆ ಅತ್ಯಾಚಾರ ಸಂತ್ರಸ್ತೆಯ ಪತ್ರ

Update: 2017-09-24 22:36 IST

ಸೋನಿಪೇಟೆ (ಹರ್ಯಾಣ), ಸೆ. 24: ಶಾಲೆಯ ಇಬ್ಬರು ಸಿಬ್ಬಂದಿಯಿಂದ ಅತ್ಯಾಚಾರಕ್ಕೆ ಒಳಗಾದ ಇಲ್ಲಿನ ಮಹಿಳೆಯೋರ್ವರು ನ್ಯಾಯ ಒದಗಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಶಾಲೆಯ ಇಬ್ಬರು ಸಿಬ್ಬಂದಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಸಿಬ್ಬಂದಿ ಕರಂಬೀರ್‌ಹಾಗೂ ಸುಖ್‌ಬೀರ್ ಎಂದು ಉಪ ಪೊಲೀಸ್ ಅಧೀಕ್ಷಕ ಮುಖೇಶ್ ಜಾಖಡ್ ತಿಳಿಸಿದ್ದಾರೆ.

ಆದಾಗ್ಯೂ, ಈ ಘಟನೆಯನ್ನು ಶಾಲೆಯ ಆಡಳಿತ ಮಂಡಳಿ ನಿರಾಕರಿಸಿದೆ.

ಪ್ರಧಾನಿ ಅವರಿಗೆ ರವಾನಿಸಲಾದ ಇಮೇಲ್‌ನಲ್ಲಿ ಶಾಲೆಯ ಈ ಇಬ್ಬರು ಸಿಬ್ಬಂದಿ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆದರೆ, ಈ ಆರೋಪವನ್ನು ಇಬ್ಬರು ಸಿಬ್ಬಂದಿ ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News