ಖಾಸಗಿ ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ: ದೂರು ದಾಖಲು
Update: 2017-09-24 23:00 IST
ಮಂಗಳೂರು, ಸೆ. 24: ನಗರ ಖಾಸಗಿ ಆಸ್ಪತ್ರೆಯೊಂದರಲ್ಲಿ ಶನಿವಾರ ನಡೆದ ಅಸಹಜ ಸಾವಿಗೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಪರ್ಪುಂಜ ನಿವಾಸಿ ಶರೀಫ್ (36) ಎಂಬವರು ಸೆ. 16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೆ. 23ರಂದು ಆಸ್ಪತ್ರೆಯ ಬಾತ್‌ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರು ದಾಖಲಾಗಿದೆ.