×
Ad

ಎರಡು ಮಕ್ಕಳ ತಂದೆಯಿಂದ ಯುವತಿಯ ಅತ್ಯಾಚಾರ: ದೂರು

Update: 2017-09-24 23:30 IST

ಉಡುಪಿ, ಸೆ.24: ಯುವತಿಯೊಬ್ಬಳನ್ನು ವಿವಾಹಿತನೋರ್ವ ಅತ್ಯಾಚಾರ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾಸ್ಕರ ಆಚಾರಿ ಅತ್ಯಾಚಾರಿ ಆರೋಪಿ ಎಂದು ಗುರುತಿಸಲಾಗಿದೆ. ಈತ 21ರ ಹರೆಯದ ತನ್ನ ನೆರೆಮನೆಯ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದರಿಂದ ಆಕೆ ಇದೀಗ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಎರಡು ಮಕ್ಕಳ ತಂದೆಯಾಗಿರುವ ಆರೋಪಿ ಭಾಸ್ಕರ ಆಚಾರಿ ಯುವತಿಯೊಂದಿಗಿನ ಆತ್ಮೀಯತೆಯನ್ನು ದುರುಪಯೋಗಪಡಿಸಿಕೊಂಡು ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News