ಏಕದಿನ, ಟೆಸ್ಟ್ ನಲ್ಲಿ ಭಾರತ ನಂ.1

Update: 2017-09-24 18:19 GMT

ಹೊಸದಿಲ್ಲಿ, ಸೆ.24: ಇಂದೋರ್‌ನಲ್ಲಿ ರವಿವಾರ ನಡೆದ ಮೂರನೆ ಏಕದಿನ ಪಂದ್ಯದಲ್ಲಿ ಜಯ ಸಾಧಿಸಿ 5 ಪಂದ್ಯಗಳ ಏಕದಿನ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿರುವ ಭಾರತ ತಂಡ ಐಸಿಸಿ ಏಕದಿನ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದೆ. ಈ ಮೂಲಕ ಭಾರತ ಟೆಸ್ಟ್ ಹಾಗೂ ಏಕದಿನ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಸರಣಿ ಆರಂಭಕ್ಕೆ ಮೊದಲು ಭಾರತ ತಂಡ ನಂ.1 ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಗಿಂತ 2 ಅಂಕದಿಂದ ಹಿಂದಿತ್ತು. ಪ್ರಸ್ತುತ ಆಸೀಸ್ ವಿರುದ್ಧ ಸರಣಿಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿರುವ ಕೊಹ್ಲಿ ಪಡೆ ದ.ಆಫ್ರಿಕವನ್ನು ಹಿಂದಿಕ್ಕಿ ನಂ.1 ಸ್ಥಾನ ವಶಪಡಿಸಿಕೊಂಡಿದೆ. ಆಸ್ಟ್ರೇಲಿಯ 3ನೆ ಸ್ಥಾನದಲ್ಲಿದೆ. ಒಂದು ವೇಳೆ ದಕ್ಷಿಣ ಆಫ್ರಿಕ ತಂಡ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಜಯಿಸಿದರೆ ನಂ.1 ಸ್ಥಾನಕ್ಕೆ ವಾಪಸಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News