ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವೂದೇ ವಿಚಾರಗಳಿಗೂ ಮೌನವಹಿಸುವುದಿಲ್ಲ : ಡಾ.ಮನು ಬಳಿಗಾರ್
ಮಂಗಳೂರು.ಸೆ,25:ಕನ್ನಡಿಗರ ಹಿತಾಸಕ್ತಿಗೆ ಧಕ್ಕೆಯಾಗುವ ಯಾವೂದೇ ವಿಚಾರಗಳಿಗೂ ವೌನವಹಿಸುವುದಿಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ನಗರದ ತಲಪಾಡಿಯಲ್ಲಿರುವ ಶಾರದಾ ವಿದ್ಯಾ ಸಂಸ್ಥೆಗಳ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾದ ಕನ್ನಡ ಸಾಹಿತ್ಯ ಪರಿಷತ್ತಿನ 101ನೆ ವಾರ್ಷಿಕ ಅಧಿವೇಶನ ಹಾಗೂ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನುದ್ದೇಶಿಸಿ ಮತನಾಡುತ್ತಿದ್ದರು.
ಕನ್ನಡಿಗರ ಹಿತಾಸಕ್ತಿಗೆ ದಕ್ಕೆಯಾಗುವ ಯಾವೂದೇ ವಿಚಾರಗಳ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಮೌನವಹಿಸಿ ಕೂರುವುದಿಲ್ಲ ಸೂಕ್ತ ರೀತಿಯಲ್ಲಿ ಪ್ರತಿಕ್ರೀಯಿಸುತ್ತಾ ಬಂದಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ಕಾವೇರಿ ನದಿ ನೀರಿನ ವಿವಾದ ,ಮಹಾದಾಯಿ ಯೋಜನೆ ಬಗ್ಗೆ ಕರ್ನಾಟಕದ ಹಿತಾಸಕ್ತಿಗೆ ಧಕ್ಕೆಯಾಗುವ ತೀರ್ಮಾನಗಳ ಬಗ್ಗೆ ಸಾಹಿತ್ಯ ಪರಿಷತ್ ಸೂಕ್ತ ವಾಗಿ ಸ್ಪಂದಿಸಿದೆ.ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ ಮಾನ ನೀಡುವ ಬಗ್ಗೆ ರಾಜ್ಯದಲ್ಲಿ 1ರಿಂದ 10ನೆ ತರಗತಿವರೆಗೆ ಸಮಾನ ಶಿಕ್ಷಣ ನೀಡುವ ಬಗ್ಗೆ ಕಸಾಪ ಇಂಗಿತ ಹೊಂದಿದೆ.ಈ ಬಗ್ಗೆ ಇರುವ ಕಾನೂನು ತೊಡಕಿನ ನಿವಾರಣೆಗಾಗಿ ಹೋರಾಟ ನಡೆಸಲಿದೆ ಎಂದು ಮನು ಬಳಿಗಾರ್ ತಿಳಿಸಿದ್ದಾರೆ.
ಕನ್ನಡ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸರಕಾರದಿಂದ ಮೂರೂವರೆ ಕೋಟಿ ಬಿಡುಗಡೆಯಾಗಿದೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.ಈ ಬಾರಿ 82 ಸಾವಿರ ಮಂದಿ ಹೊಸ ಸದಸ್ಯರಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಅಜೀವ ಸದಸ್ಯರಿಗೆ ಕಾರ್ಡ್ ನೀಡಲು ಸಾಧ್ಯವಾಗಿಲ್ಲ ಮುಂದಿನ ಮೂರು ತಿಂಗಳ ಒಳಗಾಗಿ ಅಜೀವ ಸದಸ್ಯರಾದ ಎಲ್ಲರಿಗೂ ಕಸಪಾ ಕಾರ್ಡ್ ನೀಡುವ ವ್ಯವಸ್ಥೆ ಮಾಡಲಾಗುವುದು.ಸಕಾಲದಲ್ಲಿ ಪಠ್ಯಪುಸ್ತಕ ವಿದ್ಯಾರ್ಥಿಗಳಿಗೆ ದೊರಕುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ಮನು ಬಳಿಗಾರ್ ತಿಳಿಸಿದ್ದಾರೆ.ಸಭೆಯಲ್ಲಿ ವಿವಿಧ ಜಿಲ್ಲೆಗಳ ಕಸಪಾ ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳ ಉಪಸ್ಥಿತರಿದ್ದರು.