ಕರಾವಳಿ ಟೈಮ್ಸ್ ಕನ್ನಡ ಪಾಕ್ಷಿಕ ಪತ್ರಿಕೆಯ ದ್ವಿತೀಯ ವಾರ್ಷಿಕ ಹಾಗೂ ಸದಸ್ಯತ್ವ ಅಭಿಯಾನ

Update: 2017-09-25 17:02 GMT


ವಿಟ್ಲ,ಸೆ.25 : ನಾಗರಿಕ ಸಮಾಜದ ಮತೀಯ ಸಾಮರಸ್ಯಕ್ಕೆ ಮಾಧ್ಯಮಗಳು ಹೆಚ್ಚಿನ ಒತ್ತು ನೀಡಬೇಕಾದ ಅನಿವಾರ್ಯತೆ ಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರು ಪತ್ರಿಕಾ ಧರ್ಮವನ್ನು ಎತ್ತಿ ಹಿಡಿದು ಮುಂದುವರಿಯುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಯನ್ನಿಡಬೇಕಾಗಿದೆ ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಹೇಳಿದರು. 

ಬಿ.ಸಿ.ರೋಡು ಸ್ತ್ರೀಶಕ್ತಿ ಭವನದಲ್ಲಿ ಸೋಮವಾರ ನಡೆದ ಕರಾವಳಿ ಟೈಮ್ಸ್ ಕನ್ನಡ ಪಾಕ್ಷಿಕ ಪತ್ರಿಕೆಯ ದ್ವಿತೀಯ ವಾರ್ಷಿಕ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಕರಾವಳಿ ಟೈಮ್ಸ್ ವಿಶೇಷಾಂಕ ಬಿಡುಗಡೆಗೊಳಿಸಿ ಮಾತನಾಡಿದ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ಸಚಿವ ಯು.ಟಿ. ಖಾದರ್ ಪತ್ರಕರ್ತರು ಸತ್ಯ ಹಾಗೂ ವಸ್ತುನಿಷ್ಠ ವರದಿಗಾರಿಕೆ ಮೂಲಕ ಪ್ರಸಿದ್ದಿಯನ್ನು ಪಡೆಯಬೇಕಾಗಿದೆ. ಪ್ರಾದೇಶಿಕ ಪತ್ರಿಕೆಗಳಿಗೂ ಜಾಹೀರಾತು ನೀಡುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ. ಪತ್ರಕರ್ತರಿಗೂ ಆರೋಗ್ಯ ಭಾಗ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಮುಂದಡಿ ಇಟ್ಟಿದೆ ಎಂದರು. 

ಪತ್ರಿಕೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಸರಕಾರದಿಂದ ಪತ್ರಕರ್ತರಿಗೆ ಸಿಗುವ ಸೌಲಭ್ಯಗಳನ್ನು ಗ್ರಾಮೀಣ ಪತ್ರಕರ್ತರಿಗೂ ತಲುಪುವಂತಾಗಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಬಂಟ್ವಾಳ ಪುರಸಭಾಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಬಂಟ್ವಾಳ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಎ. ಗೋಪಾಲ ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್ ಬಿ.ಸಿ.ರೋಡು, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಪಲ್ಲಮಜಲು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹಾಜಿ ಕೆ.ಎಸ್. ಅಬೂಬಕ್ಕರ್ ಮಾತನಾಡಿದರು. 

ಕೆಪಿಸಿಸಿ ಕಾರ್ಯದರ್ಶಿ ಎಂ. ಅಶ್ವನಿ ಕುಮಾರ್ ರೈ, ಸಜಿಪಮುನ್ನೂರು ಗ್ರಾ.ಪಂ. ಅಧ್ಯಕ್ಷ ಮುಹಮ್ಮದ್ ಶರೀಫ್ ನಂದಾವರ, ಬಂಟ್ವಾಳ ಪುರಸಭಾ ಸದಸ್ಯೆ ಚಂಚಲಾಕ್ಷಿ, ಮಾಜಿ ಸದಸ್ಯ ಹಾಜಿ ಪಿ. ಮುಹಮ್ಮದ್ ರಫೀಕ್, ಕಾರಾಜೆ ನೂರುಲ್ ಹುದಾ ಜುಮಾ ಮಸೀದಿ ಅಧ್ಯಕ್ಷ ಶೇಖಬ್ಬ ಹಾಜಿ, ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

ಆರಾಧನಾ ಸಮಿತಿ ಸದಸ್ಯ ಯೂಸುಫ್ ಕರಂದಾಡಿ, ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಲೋಕೇಶ್ ಸುವರ್ಣ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಮಾಜಿ ಸದಸ್ಯ ಡಿ.ಕೆ. ಹಂಝ, ಪುದು ಗ್ರಾ.ಪಂ. ಮಾಜಿ ಅಧ್ಯಕ್ಷ ಅಖ್ತರ್ ಹುಸೈನ್, ಮಂಚಿ ಗ್ರಾ.ಪಂ. ಸದಸ್ಯ ಬದ್ರುದ್ದೀನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಂದಾವರ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಆಲಡ್ಕ ಎಂಜೆಎಂ ಅಧ್ಯಕ್ಷ ಅಬೂಬಕ್ಕರ್ ತ್ರೀಮೆನ್ಸ್, ಜೆಡಿಎಸ್ ಮುಖಂಡ ಇಬ್ರಾಹಿಂ ಕೈಲಾರ್, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಜಿ.ಎ. ಅಹ್ಮದ್ ಬಾವಾ ಮೆಲ್ಕಾರ್, ಪ್ರಮುಖರಾದ ಪಿ.ಎಸ್. ಅಬ್ದುಲ್ ಲತೀಫ್, ಪದ್ಮನಾಭ ಮಯ್ಯ, ಪಿ.ಎ. ರಹೀಂ, ಮುನೀರ್ ಬಂಗ್ಲೆಗುಡ್ಡೆ, ಶರೀಫ್ ಬೋಗೋಡಿ, ಬಾಲಕೃಷ್ಣ ಕಲ್ಲಡ್ಕ, ಸತೀಶ್ ಅರಳ, ಇಲ್ಯಾಸ್ ಹಾಜಿ ಬಿ.ಸಿ.ರೋಡು, ಹನೀಫ್ ನರಿಕೊಂಬು, ರಿಯಾಝ್ ಬಂಟ್ವಾಳ, ಇರ್ಶಾದ್ ಪಿತ್ತಿಲಗುಡ್ಡೆ, ಉಬೈದ್ ಬೋಗೋಡಿ, ಕರೀಂ ಕದ್ಕಾರ್ ಮೊದಲಾದವರು ಉಪಸ್ಥಿತರಿದ್ದರು.  

ಪತ್ರಿಕಾ ಸಂಪಾದಕ ಪಿ.ಎಂ. ಅಶ್ರಫ್ ಪಾಣೆಮಂಗಳೂರು ಸ್ವಾಗತಿಸಿದರು. ಉಪಸಂಪಾದಕರಾದ ಯು. ಮುಸ್ತಫಾ ಆಲಡ್ಕ ವಂದಿಸಿ, ಲತೀಫ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು. 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News