ಹನಿಪ್ರೀತ್ ನಿರೀಕ್ಷಣಾ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ದಿಲ್ಲಿ ಹೈಕೋರ್ಟ್

Update: 2017-09-26 10:21 GMT

ಹೊಸದಿಲ್ಲಿ, ಸೆ.26: ಇಬ್ಬರು ಸಾದ್ವಿಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೈಲುಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ಸಿಂಗ್‌ರ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ನಿರೀಕ್ಷಣಾ ಜಾಮೀನು ಕೋರಿ ದಿಲ್ಲಿ ಹೈಕೋರ್ಟ್ ಮೊರೆ ಹೋಗಿದ್ದು, ಮಂಗಳವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ದಿಲ್ಲಿ ಹೈಕೋರ್ಟಿಗೆ ಜಾಮೀನು ಅರ್ಜಿ ಏಕೆ ಸಲ್ಲಿಸಿದ್ದೀರಿ? ಎಂದು ಪ್ರಶ್ನಿಸಿದ ಹೈಕೋರ್ಟ್, ನ್ಯಾಯಾಲಯಕ್ಕೆ ಶರಣಾಗುತ್ತೀರಾ? ಎಂದು ಕೇಳಿತು.

ಇದಕ್ಕೆ ಉತ್ತರಿಸಿದ ಹನಿಪ್ರೀತ್ ಪರ ವಕೀಲರು, ಹನಿಪ್ರೀತ್ ದಿಲ್ಲಿಯ ಮನೆಯಲ್ಲಿ ವಾಸವಾಗಿದ್ದಾರೆ. ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ ಎಂದು ಹೇಳಿದ್ದಾರೆ.

ತನಗೆ ಪಂಜಾಬ್ ಹಾಗೂ ಹರ್ಯಾಣದ ಡ್ರಗ್ಸ್ ಮಾಫಿಯಾಗಳಿಂದ ಜೀವ ಬೆದರಿಕೆ ಇದ್ದು, ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿ ಹನಿಪ್ರೀತ್ ದಿಲ್ಲಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News