ರೊಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡಬಾರದು: ವರುಣ್ ಗಾಂಧಿ

Update: 2017-09-26 14:12 GMT

ಹೊಸದಿಲ್ಲಿ, ಸೆ.26: ಮ್ಯಾನ್ಮಾರ್ ನಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಪ್ಪಿಸಿಕೊಂಡು ಭಾರತದಲ್ಲಿ ವಾಸಿಸುತ್ತಿರುವ ರೊಹಿಂಗ್ಯಾ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬೇಕು ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ನವಭಾರತ್ ಟೈಮ್ಸ್ ನ ಸಂಪಾದಕೀಯದಲ್ಲಿ ರೊಹಿಂಗ್ಯಾ ಮುಸ್ಲಿಮರ ವಿಚಾರವನ್ನು ಪ್ರಸ್ತಾಪಿಸಿರುವ ವರುಣ್ ಗಾಂಧಿ, ರೊಹಿಂಗ್ಯಾ ಮುಸ್ಲಿಮರನ್ನು ಗಡೀಪಾರು ಮಾಡಬಾರದು, ಮಾನವೀಯತೆಯಿಂದ ನಡೆಸಿಕೊಳ್ಳಬೇಕು ಎಂದಿದ್ದಾರೆ.

ವರುಣ್ ಗಾಂಧಿಯವರ ಈ ಬರಹವು ರೊಹಿಂಗ್ಯನ್ನರನ್ನು ದೇಶದಿಂದ ಗಡೀಪಾರು ಮಾಡುವ ಕೇಂದ್ರ ಸರಕಾರದ ಚಿಂತನೆಗೆ ತದ್ವಿರುದ್ಧವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ವ್ಯವಹಾರಗಳ ಕೇಂದ್ರ ಸಚಿವ ಹಂಸರಾಜ್ ಅಹಿರ್, “ದೇಶದ ಹಿತಾಸಕ್ತಿಯ ಬಗ್ಗೆ ಯೋಚಿಸುವವರು ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದಾರೆ.

ಈ ಬಗ್ಗೆ ತಕ್ಷಣ ಪ್ರತಿಕ್ರಿಯೆ ನೀಡಿರುವ ವರುಣ್ ಗಾಂಧಿ, ತಾನು ಭಾರತದ ಆಶ್ರಯ ನೀತಿಯನ್ನು ವಿವರಿಸುವುದಕ್ಕಾಗಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News