×
Ad

ತೆರದಾಳ ಕ್ಷೇತ್ರದಿಂದ ಸ್ಪರ್ಧೆಯಿಲ್ಲ: ಯಡಿಯೂರಪ್ಪ

Update: 2017-09-26 19:21 IST

ಬೆಂಗಳೂರು, ಸೆ.26: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾನು ಬಾಗಲಕೋಟೆ ಜಿಲ್ಲೆಯ ತೆರದಾಳ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವುದಾಗಿ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರ, ತೆರದಾಳ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಯಾವ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂಬುದು ಇನ್ನು ಅಂತಿಮವಾಗಿಲ್ಲ ಎಂದರು.

ರಾಜ್ಯದ ಬೇರೆ ಬೇರೆ ಕ್ಷೇತ್ರಗಳಿಂದ ನನಗೆ ಆಹ್ವಾನವಿದೆ. ಹಾಲಿ ಶಾಸಕರು ತಮ್ಮ ಕ್ಷೇತ್ರದಿಂದ ಸ್ಪರ್ಧಿಸುವಂತೆ ನನ್ನನ್ನು ಕರೆಯುತ್ತಿದ್ದಾರೆ. ಈ ನಡುವೆ ಶಿಕಾರಿಪುರ ಕ್ಷೇತ್ರದ ಜನರು ನೀವು ಏಕೆ ಈ ಕ್ಷೇತ್ರ ಬಿಟ್ಟು ಹೋಗುತ್ತಿದ್ದೀರಾ. ರಾಜಕೀಯವಾಗಿ ಬೆಳೆದ ಕ್ಷೇತ್ರವನ್ನು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಹೋರಾಟವನ್ನು ಕೈ ಬಿಟ್ಟಿರುವ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಬಿಐ ತನಿಖೆ ಬಳಿಕ ಹೋರಾಟದ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಹೊಸದಿಲ್ಲಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಆದುದರಿಂದ, ಇಂದಿನಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಹೋರಾಟವನ್ನು ಮುಂದೂಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News