ಮೈಸೂರು ದಸರಾ ಉತ್ಸವಕ್ಕೆ ಏರ್ ಶೋ ಮೆರುಗು: ಮುಖ್ಯಮಂತ್ರಿ ಸಿದ್ದರಾಮಯ್ಯ
Update: 2017-09-26 22:35 IST
ಬೆಂಗಳೂರು, ಸೆ.26: ಮೈಸೂರು ದಸರಾ ಮಹೋತ್ಸವಕ್ಕೆ ಈ ಬಾರಿ ಏರ್ ಶೋ ವಿಶೇಷ ಮೆರುಗು ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಬಣ್ಣಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಏರ್ ಶೋ ನಡೆಸಲು ಒಪ್ಪಿಗೆ ಸಿಕ್ಕಿದೆ. ಸೆ.29ರ ಬೆಳಗ್ಗೆ 11ಕ್ಕೆ ಮೈಸೂರು ದಸರಾ ಏರ್ ಶೋ ಉದ್ಘಾಟನೆಯಾಗಲಿದೆ ಎಂದು ತಿಳಿಸಿದರು.
ವಿಶ್ವವಿಖ್ಯಾತ ದಸರಾ ವೇಳೆ ಮೈಸೂರಿನಲ್ಲಿ ಏರ್ ಶೋ ನಡೆಸುವಂತೆ ಇತ್ತೀಚೆಗೆ ಹೊಸದಿಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಎಂದು ಅವರು ಸ್ಮರಿಸಿದರು.