×
Ad

ಸೌದಿ: ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ

Update: 2017-09-26 22:52 IST

ರಿಯಾದ್ (ಸೌದಿ ಅರೇಬಿಯ), ಸೆ. 26: ಸೌದಿ ಅರೇಬಿಯದ ಖಾಸಗಿ ಕ್ಷೇತ್ರದ ಸಗಟು ಮತ್ತು ಚಿಲ್ಲರೆ ವ್ಯವಹಾರದ ಕಂಪೆನಿಗಳಲ್ಲಿ ಕೆಲಸ ಮಾಡುವ ಸೌದಿ ಮಹಿಳೆಯರ ಸಂಖ್ಯೆ 2016 ಕೊನೆಯ ವೇಳೆಗೆ 1,59,588 ಆಗಿತ್ತು ಎಂದು ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರಿಯಾದ್ ವಲಯದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಇಲ್ಲಿ ಸೌದಿ ಅರೇಬಿಯದಲ್ಲಿ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವ ಒಟ್ಟು ಮಹಿಳೆಯರ 28 ಶೇಕಡದಷ್ಟು ಕೆಲಸ ಮಾಡುತ್ತಿದ್ದಾರೆ.

ಅದೇ ವೇಳೆ, ಹಣಕಾಸು ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸಂಖ್ಯೆಯಲ್ಲಿ 2016ರಲ್ಲಿ ಶೇಕಡ 8 ರಷ್ಟು ಏರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News