ಬೆಂಗಳೂರಿನಲ್ಲಿ 1ಲಕ್ಷ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

Update: 2017-09-27 09:21 GMT

ಬೆಂಗಳೂರು, ಸೆ.27: ಉದ್ಯಾನನಗರಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ನಿರ್ಮಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಇಂದು ನಡೆದ ಸಚಿವ ಸಂಪುಟದ ಸಭೆಯ ಬಳಿಕ ಕಾನೂನು ಸಚಿವ ಟಿ.ಬಿ. ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.

ಆರ್ಥಿಕವಾಗಿ ಹಿಂದುಳಿದವರಿಗೆ ಹೌಸಿಂಗ್ ಬೋರ್ಡ್ ಮತ್ತು ಕೊಳಚೆ ನಿರ್ಮೂಲನಾ ಮಂಡಳಿ , ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಮನೆ  ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು. 1512 ಪಶುಚಿಕಿತ್ಸಾಲಯಗಳ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ . ಮೌಢ್ಯ ಪ್ರತಿಬಂಧಕ ಕರಡು ಮಸೂದೆ ಮಂಡನೆಗೆ ಸಚಿವ ಸಂಪುಟ ಅನುಮೋಧನೆ  ನೀಡಿದೆ.  ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.

 ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಯಾಗಿಲ್ಲ. ದಿನಾಂಕವನ್ನು ಮುಖ್ಯ ಮಂತ್ರಿಯವರು ನಿರ್ಧರಿಸುತ್ತಾರೆ ಎಂದು ಹೇಳಿದರು.

ನಿರ್ವಹಣಾ ಮಂಡಳಿಗೆ ವಿರೋಧ: ನೀರು ನಿರ್ವಹಣಾ  ಮಂಡಳಿಯ ನೇಮಕಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಮಂಡಳಿ ರಚನೆ ಸಂಸತ್ತಿನ ಪರಮಾಧಿಕಾರವಾಗಿದೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಅಫಿಡವಿಟ್ ಸಲ್ಲಿಸಲಾಗಿದೆ ಕೃಷ್ಣ ಮೇಲ್ದಂಡೆ 3 ಹಂತದ ಯೋಜನೆಗೆ  51,148 ಕೋಟಿ ರೂ  ಮೊತ್ತದ ಪರಿಷ್ಕೃತ ಅಂದಾಜುಪಟ್ಟಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News