×
Ad

ಮಂಗಳೂರು ವಿವಿ ಕುಸ್ತಿ ಪಂದ್ಯಾಟ: ಆಳ್ವಾಸ್ ಚಾಂಪಿಯನ್

Update: 2017-09-27 19:05 IST

ಉಡುಪಿ, ಸೆ.27: ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ್‌ಕಾಲೇಜು ಮಟ್ಟದ ಪುರುಷರು ಮತ್ತು ಮಹಿಳೆಯರ ಕುಸ್ತಿ ಪಂದ್ಯಾಟದ ಎರಡೂ ವಿಭಾಗದಲ್ಲೂ ಮೂಡಬಿದ್ರೆ ಆಳ್ವಾಸ್ ಕಾಲೇಜು ತಂಡ ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ಮಹಿಳೆಯರ ವಿಭಾಗದಲ್ಲಿ ಆಳ್ವಾಸ್(40 ಅಂಕ) ಪ್ರಥಮ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು(14 ಅಂಕ) ದ್ವಿತೀಯ, ಮಂಗಳೂರು ಕಾರ್‌ಸ್ಟ್ರೀಟ್ ಸರಕಾರಿ ಪ್ರಥಮ ದರ್ಜೆ ಕಾಲೇಜು(13 ಅಂಕ) ತೃತೀಯ ಮತ್ತು ಪುರುಷರ ವಿಭಾಗ ದಲ್ಲಿ ಆಳ್ವಾಸ್(25 ಅಂಕ) ಪ್ರಥಮ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು(16) ದ್ವಿತೀಯ, ಮಂಗಳೂರು ರೊಸಾರಿಯೋ ಕಾಲೇಜು(6) ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯುತ್ತಮ ಕುಸ್ತಿ ಪಟು ಪ್ರಶಸ್ತಿಯನ್ನು ಪುರುಷರ ವಿಭಾಗ ದಲ್ಲಿ ಆಳ್ವಾಸ್‌ನ ಬಸಪ್ಪ ತೆರದಾಳ್, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್‌ನ ಲಕ್ಷ್ಮಿಬಸವರಾಜ್ ತನ್ನದಾಗಿಸಿಕೊಂಡರು.

ಸಮಾರೋಪ: ಇಂದು ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಪೇಜಾವರ ಕಿರಿಯ ಯತಿ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಜೇತ ತಂಡಗಳಿಗೆ ಬಹು ಮಾನವನ್ನು ವಿತರಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿ ದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ.ಹರಿದಾಸ್ ಕೂಳೂರು, ಕಾಲೇಜು ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಪ್ರದೀಪ್ ಕುಮಾರ್, ಉದ್ಯಮಿ ಅನಂತ ಸಾಮಗ ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಉಪಸ್ಥಿತರಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ರಮೇಶ್ ಟಿ.ಎಸ್. ಸ್ವಾಗತಿಸಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವಿಶಾಖ್ ವಿಜೇತರ ಪಟ್ಟಿಯನ್ನು ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಸ್ಯಾಂಡ್ರಾ ಸೋನ್ಸ್ ವಂದಿಸಿದರು. ಕನ್ನಡ ಉಪನ್ಯಾಸಕ ಮಂಜು ನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News