×
Ad

ವಿದ್ಯಾರ್ಥಿಗಳ ಪರ್ವತಾರೋಹಣ ತರಬೇತಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Update: 2017-09-27 19:56 IST

ಬೆಂಗಳೂರು, ಸೆ.27: ಮೆಟ್ರಿಕ್ ನಂತರದ ಹಾಸ್ಟೆಲ್‌ಗಳ ಪರಿಶಿಷ್ಟ ಜಾತಿಯ 60 ವಿದ್ಯಾರ್ಥಿಗಳ ಪರ್ವತಾರೋಹಣ ತರಬೇತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದರು.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕಿಟ್‌ಗಳನ್ನು ವಿತರಿಸುವ ಮೂಲಕ ಈ ತರಬೇತಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಮತ್ತು ಸಾಹಸಿ ಪ್ರವೃತ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಲು ರಾಜ್ಯ ಸರಕಾರ ಈ ವಿನೂತನ ಯೋಜನೆ ಜಾರಿಗೆ ತಂದಿದೆ. ತರಬೇತಿಗೆ ಆಯ್ಕೆಯಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಿಮಾಚಲ ಪ್ರದೇಶದ ಮನಾಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಮೌಂಟನೇರಿಂಗ್ ಸಂಸ್ಥೆಯಲ್ಲಿ ಸೆ.28ರಿಂದ ಅ.12ರವರೆಗೆ ತರಬೇತಿ ನೀಡಲಾಗುವುು ಎಂದು ತಿಳಿಸಿದರು.

ಸೋಲು ಮತ್ತು ಗೆಲುವನ್ನು ಸಮಚಿತ್ತದಿಂದ ಸ್ವೀಕಾರ ಮಾಡಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ತರಬೇತಿಗೆ ಹೊರಟವರಿಗೆ ಕಿವಿಮಾತು ಹೇಳಿದ ಅವರು, ಎಲ್ಲರಿಗೂ ಶುಭ ಕೋರಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಯುವಜನ ಸೇವೆ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News