×
Ad

ಗ್ರಾಮ ಸಮೃದ್ಧಿ, ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮ

Update: 2017-09-27 20:47 IST

ಉಡುಪಿ, ಸೆ.27: ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಹಾಗೂ ರಾಜ್ಯ ಸರಕಾರದ ಸಂಯೋಗದಿಂದ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಅ.1ರಿಂದ 15ರವರೆಗೆ ಗ್ರಾಮ ಸಮೃದ್ಧಿ ಹಾಗೂ ಸ್ವಚ್ಛತಾ ಪಾಕ್ಷಿಕ ಕಾರ್ಯ್ರಮ ವನ್ನು ಆಚರಿಸಲಾಗುವುದು.

ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ಗ್ರಾಮೀಣ ಜನರ ಜೀವನೋಪಾಯಕ್ಕೆ ಯೋಜನೆಗಳನ್ನು ರೂಪಿಸುವ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಗ್ರಾಪಂಗಳ ಚುನಾಯಿತ ಪ್ರತಿನಿಧಿಗಳು, ಮಹಿಳಾ ಸ್ವಯಂ ಸೇವಾ ಸಂಘಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಬಾಗವಹಿಸುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News