ಲಾರಿ ಬೈಕ್ ಗೆ ಢಿಕ್ಕಿ: ಇಬ್ಬರು ಮೃತ್ಯು
Update: 2017-09-28 19:02 IST
ದಾವಣಗೆರೆ, ಸೆ.28: ಲಾರಿಯೊಂದು ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಗುರುವಾರ ನಡೆದಿದೆ.
ತಾಲೂಕಿನ ನಾಗರಾಜ (45 ವರ್ಷ), ಯಲ್ಲಪ್ಪ (53) ಮೃತಪಟ್ಟವರೆಂದು ಗುರುತಿಸಲಾಗಿದೆ.
ನಾಗರಾಜ, ಯಲ್ಲಪ್ಪ ಅವರು ತನ್ನ ಬೈಕ್‍ನಲ್ಲಿ ಮಲ್ಲ ಶೆಟ್ಟಿಹಳ್ಳಿ ಬಳಿ ತೆರಳುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ನಾಗರಾಜ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ ಯಲ್ಪಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.