×
Ad

ಎಚ್‌ಡಿಕೆ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2017-09-28 19:29 IST

ಬೆಂಗಳೂರು, ಸೆ.28: ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬನ್ನೇರುಘಟ್ಟ ರಸ್ತೆಯಲ್ಲಿನ ಅಪೋಲೊ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಿಸಿದರು.

ಗುರುವಾರ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಅನಿತಾ ಕುಮಾರಸ್ವಾಮಿ ಹಾಗೂ ಆಸ್ಪತ್ರೆಯ ವೈದ್ಯರಿಂದ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಶೀಘ್ರ ಗುಣಮುಖರಾಗುವಂತೆ ಕುಮಾರಸ್ವಾಮಿಗೆ ಹಾರೈಸಿದರು.

ಬಳಿಕ ಆಸ್ಪತ್ರೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ಆರೋಗ್ಯ ಉತ್ತಮವಾಗಿದೆ. ಇನ್ನೆರೆಡು ಮೂರು ದಿನ ಆಸ್ಪತ್ರೆಯಲ್ಲೇ ಇರುವಂತೆ ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ. 15 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದ್ದಾರೆ ಎಂದರು.

ಮೊದಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಆನಂತರ ಪಕ್ಷ ಸಂಘಟನೆ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೆ ಓಡಾಡುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News