ಎನ್‌ಎಸ್‌ಯುಐ ಉಸ್ತುವಾರಿ ನೇಮಕ
Update: 2017-09-28 20:44 IST
ಉಡುಪಿ, ಸೆ.28: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಅಮೃತ್ ಶೆಣೈ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಬೀಬ್ ಆಲಿಯವರನ್ನು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಪಾಲ ಪೂಜಾರಿ ನೇಮಕ ಮಾಡಿದ್ದಾರೆ.
ಇತ್ತೀಚಿಗೆ ರಾಜ್ಯಸಭಾ ಸದಸ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫೆರ್ನಾಂಡಿಸ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಪಕ್ಷದ ವಿವಿಧ ಘಟಕಗಳ ಸಭೆಯಲ್ಲಿ ಈ ನೇಮಕಾತಿ ನಡೆದಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.