×
Ad

ವಿಷನ್ 2025- ಸಿದ್ದತೆಗೆ ವಿಡಿಯೋ ಕಾನ್ಫರೆನ್ಸ್

Update: 2017-09-28 21:12 IST

ಉಡುಪಿ, ಸೆ.28: ಮುಂದಿನ ಏಳು ವರ್ಷಗಳಲ್ಲಿ ರಾಜ್ಯಕ್ಕೆ ಉತ್ತಮ ಆಡಳಿತ ತಂತ್ರವನ್ನು ಒದಗಿಸುವ ಉದ್ದೇಶ ಹೊಂದಿರುವ ವಿಷನ್-2025 ಜಿಲ್ಲಾ ಮಟ್ಟದ ಕಾರ್ಯಕ್ರಮ ಅ.4ರಂದು ಬೆಳಗ್ಗೆ ಕೆಎಂಸಿಯ ಡಾ.ಟಿಎಂಎ ಪೈ ಹಾಲ್‌ನಲ್ಲಿ ಆಯೋಜಿಸಲಾಗಿದೆ.
 ಈ ಸಂಬಂಧ ಜಿಲ್ಲಾಡಳಿತ ಈಗಾಗಲೇ ಹಲವು ಪೂರ್ವಭಾವಿ ಸಭೆಗಳನ್ನು ನಡೆಸಿದೆ. ಕಾರ್ಯಕ್ರಮ ಆಯೋಜನೆ ಸಂಬಂಧ ವಿಷನ್-2025ರ ಸಿಇಒ ರೇಣುಕಾ ಚಿದಂಬರಮ್ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವೆಣ್ಣನ್ ಉಪಸ್ಥಿತರಿದ್ದರು. ಈ ಸಂಬಂಧ ಜಿಲ್ಲಾಡಳಿತ ಎಲ್ಲ ಸಿದ್ದತೆಗಳನ್ನು ಪೂರ್ಣಗೊಳಿಸಿದೆ ಎಂದು ಅಪರ  ಅಪರ ಜಿಲ್ಲಾಧಿಕಾರಿ ಅನುರಾಧ ಮಾಹಿತಿ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News