×
Ad

ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಪ್ರತಿಭಟನೆ

Update: 2017-09-28 21:43 IST

ಹಿರಿಯಡ್ಕ, ಸೆ.28: ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಕಾಪು ಉತ್ತರ ವಲಯ ಬ್ಲಾಕ್ ಸಮಿತಿ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಇಂದು ಕಾಪು ಶಾಸಕ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಿರಿಯಡಕ ಪೇಟೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಭೆಯನ್ನುದ್ದೇಶಿಸಿ ಮಾತನಾಡಿದ ವಿನಯಕುಮಾರ್ ಸೊರಕೆ, ದೇಶದ ಜನತೆಗೆ ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಮೋದಿ ಸರಕಾರ, ಈಗ ಜನಸಾಮಾನ್ಯರ ಕುರಿತಂತೆ ನಿರ್ಲಕ್ಷದ ಧೋರಣೆ ತಳೆದಿದೆ. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲು ವಿಫಲವಾಗಿರುವ ಕೇಂದ್ರ ಸರಕಾರ ಪೆಟ್ರೋಲ, ಡಿಸೇಲ್ ಹಾಗೂ ಗ್ಯಾಸ್ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು, ವಿಶೇಷವಾಗಿ ಮಹಿಳೆಯರನ್ನು ಸಂಕಷ್ಟಕ್ಕೆ ತಳ್ಳಿದೆ ಎಂದರು.

ಸಭೆಯನ್ನುದ್ದೇಶಿಸಿ ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ, ಕಾಂಗ್ರೆಸ ನಾಯಕರಾದ ಅಮೃತ ಶೆಣೈ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಉದ್ಯಾವರ ನಾಗೇಶ್ ಕುಮಾರ್ ಮುಂತಾದವರು ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಅಬ್ದುಲ್ ಅಝೀಝ್, ಹಬೀಲ್ ಅಲಿ, ಇಸ್ಮಾಯಿಲ್ ಆತ್ರಾಡಿ, ಸಂತೋಷ್ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News