ಡಾ. ಶಿವರಾಮ ಕಾರಂತರ ಚಿತ್ರ ರಚನಾ ಸ್ಪರ್ಧೆ
Update: 2017-09-29 11:58 IST
ಮಂಗಳೂರು, ಸೆ.29: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಅ.10ರಂದು ಜರಗುವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಅಂಚೆ ಕಾರ್ಡಿನಲ್ಲಿ ಕಾರಂತರ ಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಎಸೆಸೆಲ್ಸಿವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಪೆನ್ಸಿಲ್‌ನಿಂದ ರಚಿಸಿದ ಕಪ್ಪು-ಬಿಳುಪು ಚಿತ್ರಗಳನ್ನು ಮಾತ್ರ ರಚಿಸಬೇಕು. ಅ.6 ರೊಳಗೆ ಅಂಚೆಕಾರ್ಡ್‌ಗಳನ್ನು ಸ್ವವಿಳಾಸ ಮತ್ತು ಸಂಪರ್ಕ ದೂರವಾಣಿ ಸಂಖ್ಯೆಯೊಂದಿಗೆ ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಗಾಂಧಿ ರಸ್ತೆ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ತಲುಪುವಂತೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.