ನಿವೇಶನಕ್ಕಾಗಿ ಬೈಂದೂರು ಗ್ರಾಪಂಗೆ ಮನವಿ
Update: 2017-09-30 21:18 IST
ಕುಂದಾಪುರ, ಸೆ.30: ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ ನಿವೇಶನ ರಹಿತರು ನಿವೇಶನಕ್ಕಾಗಿ ಗ್ರಾಮ ಅಭಿವೃದ್ಧಿ ಅಧಿಕಾರಿ ನಾಗೇಶ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಕುಂದಾಪುರ ತಾಲೂಕು ಅಧ್ಯಕ್ಷ ಎಚ್. ನರಸಿಂಹ, ಸಿಪಿಎಂ ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಬೈಂದೂರು ಕಟ್ಟಡ ಕಾರ್ಮಿಕರ ಸಂಘದ ಅದ್ಯಕ್ಷ ಗಣೇಶ್ ತೊಂಡೆಮಕ್ಕಿ ಮಾತನಾಡಿದರು.
ಕೃಷಿಕೂಲಿಕಾರ ಸಂಘಟನೆಯ ಅಧ್ಯಕ್ಷ ವೆಂಕಟೇಶ ಕೋಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಪದಾಧಿಕಾರಿ ನಾಗರತ್ನ ನಾಡ ಸ್ವಾಗತಿಸಿದರು. ಈ ಗಣೇಶ್ ಮೊಗವೀರ, ಪದ್ಮಾವತಿ ಶೆಟ್ಟಿ, ಕುಶಲ, ಮುತ್ತ ಪ್ರತಿಭಟನೆ ನೇತೃತ್ವ ವಹಿಸಿದ್ದರು.