×
Ad

ಯಡ್ತರೆ: ನಿವೇಶನ ರಹಿತರಿಂದ ಪ್ರತಿಭಟನೆ

Update: 2017-09-30 21:19 IST

ಬೈಂದೂರು, ಸೆ.30: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ ನಿವೇಶನ ರಹಿತರು ಇಂದು ಯಡ್ತರೆ ಗ್ರಾಮ ಪಂಚಾಯತ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬಳಿಕ ಸುಮಾರು 264 ಅರ್ಜಿದಾರರು ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘಟನೆ ನೇತೃತ್ವದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿ ದರು. ಕೃಷಿಕೂಲಿಕಾರರ ಸಂಘಟನೆ ಅಧ್ಯಕ್ಷ ವೆಂಕಟೇಶ್ ಕೋಣಿ, ಕಾರ್ಯದರ್ಶಿ ನಾಗರತ್ನ ನಾಡ, ಸಿಐಟಿಯು ತಾಲೂಕು ಅಧ್ಯಕ್ಷ ಎಚ್.ನರಸಿಂಹ, ಸಿಪಿಎಂ ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು.

ಮುಖಂಡರಾದ ಗಣೇಶ್ ತೊಂಡೆಮಕ್ಕಿ, ಗಣೇಶ್ ಮೊಗವೀರ ಬೈಂದೂರು, ಪದ್ಮಾವತಿ, ಕುಶಲ, ಶೀಲಾವತಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News