3.2 ಕೆಜಿ ಮಾದಕವಸ್ತು ವಶ
ಬೆಂಗಳೂರು, ಸೆ.30: ಕಾನೂನು ಬಾಹಿರವಾಗಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿದೇಶಿ ಪ್ರಜೆ ಸೇರಿ ಮೂವರನ್ನು ಬಂಧಿಸಿ, 3 ಕೆ.ಜಿ. 200 ಗ್ರಾಂ ಗಾಂಜಾ ವಶಕ್ಕೆ ಪಡೆಯುವಲ್ಲಿ ಕೊತ್ತನೂರು ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ರವಾಂಡ ದೇಶದ ಕೈತಲೆ ಫ್ರೆಡ್ರಿಕ್(25), ಆಂಧ್ರ ಪ್ರದೇಶದ ವಿಜಯವಾಡ ಮೂಲದ ನೀರಜ್(23), ಶೈಲೇಶ(23) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಕೊತ್ತನೂರು ಚಿಕ್ಕಭೈರತಿಯ ಬ್ಲೆಸ್ಸಿಂಗ್ ಗಾರ್ಡನ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಹೊಯ್ಸಳ ವಾಹನ ಸಂಖ್ಯೆ 216ರಲ್ಲಿದ್ದಂತಹ ಎಚ್.ಸಿ.ಹನುಮೇಶ್, ಪಿ.ಸಿ ಶರಣಗೌಡ ಪಾಟೀಲ ಗಮನಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.