ಕೌಟುಂಬಿಕ ಕಲಹ: ಯುವಕ ಆತ್ಮಹತ್ಯೆ
Update: 2017-10-01 20:00 IST
ಬೆಂಗಳೂರು, ಅ.1: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಯುವಕ ಮನನೊಂದು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಆರ್.ಎಸ್ ಪಾಳ್ಯದ ನಿವಾಸಿ ನಾಗರಾಜ(26) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುತ್ತಿದ್ದ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಬಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.