ಠಾಣೆಯ ಆವರಣದೊಳಗೆ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್
Update: 2017-10-01 21:11 IST
ಹೊಸದಿಲ್ಲಿ, ಅ. 2: ಪೊಲೀಸ್ ಠಾಣೆಯ ಆವರಣದೊಳಗೆ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಉತ್ತರಪ್ರದೇಶ ರಾಮ್‌ಪುರ ಪ್ರದೇಶದ ಪೊಲೀಸ್ ಸಿಬ್ಬಂದಿಯೊಬ್ಬನನ್ನು ಅಮಾನತುಗೊಳಿಸಲಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕೇಮ್ರಿ ಪೊಲೀಸ್ ಠಾಣೆಯ ಪೊಲೀಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಹಾಗೂ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಇಂತಹ ಹೀನಾಯ ಕೃತ್ಯ ಎಸಗಿರುವುದು ಉತ್ತರಪ್ರದೇಶದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡಿದೆ.