ಕೆರೆಗೆ ಬಿದ್ದು ಯುವಕ ಮೃತ್ಯು
Update: 2017-10-02 18:16 IST
ಶಿವಮೊಗ್ಗ, ಅ. 2: ಕರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಕಲ್ಯಾಣಿ ಚೌಕದ ಶರಾವತಿ ಹಿನ್ನೀರಿನ ಪ್ರದೇಶದಲ್ಲಿ ನಡೆದಿದೆ.
ರಾಘವೇಂದ್ರ (30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ರಾಘವೇಂದ್ರ ಅವರು ಕುಟುಂಬ ಸದಸ್ಯರ ಜೊತೆಗೂಡಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.