×
Ad

ಅ. 5ರಂದು ಪ್ರಥಮ ವಾರ್ಷಿಕ ಮಹಾಸಭೆ

Update: 2017-10-02 19:38 IST

ಮಂಗಳೂರು, ಅ. 2: ದ.ಕ. ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಪ್ರಥಮ ರ್ವಾಕ ಮಹಾಸಭೆಯು ಅ. 5ರಂದು ಬೆಳಗ್ಗೆ 9:30ಕ್ಕೆ ನಗರದ ಡಾನ್‌ಬಾಸ್ಕೋ ಹಾಲ್‌ನಲ್ಲಿ ನಡೆಯಲಿದೆ.ಮಹಾಸಭೆಯ ಉದ್ಘಾಟನೆಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್.ಹೆಗಡೆ ನೆರವೇರಿಸಲಿದ್ದಾರೆ. ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಸಂಚಾರ ವಿಭಾಗದ ಎಸಿಪಿ ತಿಲಕ್‌ಚಂದ್ರ, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಫಾ. ಮೈಕಲ್ ಎಲ್., ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಲೆತಿಶಿಯಾ ಎ.ಸಿ., ಪೂರ್ವ ಸಂಚಾರ ಪೊಲೀಸ್ ಠಾಣೆಯ ನಿರೀಕ್ಷಕ ಸುರೇಶ್‌ಕುಮಾರ್, ಉತ್ತರ ಸಂಚಾರ ಪೊಲೀಸ್ ಠಾಣೆಯ ನಿರೀಕ್ಷಕ ಮಂಜುನಾಥ, ಸಂಘದ ಗೌರವಾಧ್ಯಕ್ಷ ಸುನಿಲ್‌ಕುಮಾರ್ ಬಜಾಲ್, ಸಂಘದ ಅಧ್ಯಕ್ಷ ಮೋಹನ್‌ಕುಮಾರ್ ಅತ್ತಾವರ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅನ್ಸಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News