×
Ad

ಫೊಟೋಗ್ರಾಫರ್ಸ್‌ ಅಸೋಸಿಯೇಶನ್‌ನಿಂದ ಸ್ವಚ್ಛತಾ ಕಾರ್ಯಕ್ರಮ

Update: 2017-10-02 22:54 IST

ಪುತ್ತೂರು, ಅ.2: ಸೌತ್ ಕೆನರಾ ಫೊಟೋಗ್ರಾಫರ್ಸ್‌ ಅಸೋಸಿಯೇಶನ್ ಪುತ್ತೂರು ವಲಯದ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು.

ನಗರದ ಜೈನ ಭವನದ ಬಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಘದ ಮಾಜಿ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಮಾತನಾಡಿ ಸಾಮಾಜಿಕ ಸ್ವಾಸ್ಥ್ಯದ ದೃಷ್ಟಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿಯವರ ಕರೆಯಂತೆ ಎಲ್ಲಾ ಕಡೆ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಫೊಟೋಗ್ರಾಫರ್ಸ್‌ ಅಸೋಸಿಯೇಶನ್ ಸಹ ಇದಕ್ಕೆ ಬೆಂಬಲಿಸಿ ಕೈಜೋಡಿಸಿದೆ ಎಂದರು.

ನಗರದ ಜೈನ ಭವನದ ಬಳಿಯಿಂದ ಪರ್ಲಡ್ಕ ತನಕ ಸ್ವಚ್ಚತಾ ಕಾರ್ಯ ನಡೆಸಲಾಯಿತು. ಸಂಘದ ಗೌರವಾಧ್ಯಕ್ಷ ಸುಭಾಕರ ಶೆಟ್ಟಿ ಮಿತ್ತೂರು ಸೇರಿದಂತೆ ಸುಮಾರು 40 ಮಂದಿ ಸದಸ್ಯರು ಪಾಲ್ಗೊಂಡರು. ಸಂಘದ ಅಧ್ಯಕ್ಷ ನವೀನ್ ರೈ ಪಂಜಳ ಸ್ವಾಗತಿಸಿ, ಕಾರ್ಯದರ್ಶಿ ರಾಜೇಶ್ ಬೊಳುವಾರು ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News