×
Ad

ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಬಿಜೆಪಿಗೆ ರಾಜೀನಾಮೆ

Update: 2017-10-02 23:59 IST

ಮೈಸೂರು, ಅ.2: ಎಚ್.ಡಿ.ಕೋಟೆ ವಿಧಾನ ಸಭಾಕ್ಷೇತ್ರದ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಚ್ ಡಿ ಕೋಟೆ ಬಿಜೆಪಿ ಕಚೇರಿಯಲ್ಲಿ ತಾಲೂಕು ಘಟಕದ ಅಧ್ಯಕ್ಷ ಸಿ ಕೆ ಗಿರೀಶ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವೈಯುಕ್ತಿಕ ಕಾರಣಗಳಿಂದ ಬಿಜೆಪಿ ತೊರೆಯುವುದಾಗಿ ಹೇಳಿದ್ದಾರೆ. ಬೆಂಬಲಿಗರ ಜತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿರುವ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಈಗಾಗಲೇ  ದೂರವಾಣಿ ಮುಖಾಂತರ ಸಂಪರ್ಕಿಸಿದ್ದಾರೆ ಎಂದಿದ್ದಾರೆ. ಯಾವ ಪಕ್ಷಕ್ಕೆ ಸೇರಬೇಕೆಂಬುದನ್ನು ಇನ್ನೂ ತೀರ್ಮಾನಿಸಿಲ್ಲ . ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News