ಮಾದಕ ವಸ್ತು ಮಾರಾಟ: ಮೂವರ ಬಂಧನ
Update: 2017-10-03 19:22 IST
ಬೆಂಗಳೂರು, ಅ.3: ಮಾದಕ ವಸ್ತು ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ 1.6 ಕೆಜಿ ಗಾಂಜಾ ವಶಕ್ಕೆ ಪಡೆಯುವಲ್ಲಿ ವಿವಿ ಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಇಮ್ರಾನ್(20), ಖಲೀಲ್(23) ಮತ್ತು ರವಿ(24) ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ವಿವಿ ಪುರಂ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.