×
Ad

ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ರಚನೆ

Update: 2017-10-03 22:15 IST

ಬೆಂಗಳೂರು, ಅ.3: ಮುಂಬರುವ ವಿಧಾನಸಭಾ ಚುನಾವಣೆಗೆ ಪ್ರಣಾಳಿಕೆ ಸಿದ್ಧಪಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸಮಿತಿಗೆ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಶಾಸಕರಾದ ಎಸ್.ಸುರೇಶ್‌ಕುಮಾರ್, ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಡಾ.ಅಶ್ವತ್ಥನಾರಾಯಣ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್, ಸಂಸದ ಶಿವಕುಮಾರ್ ಉದಾಸಿ, ಮಾಜಿ ಸಂಸದ ಜಿ.ಎಸ್.ಬಸವರಾಜು, ಡಾ.ವಾಮನಾಚಾರ್ಯ.
ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಗಣೇಶ ಯಾಜಿ, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ವಿಧಾನಪರಿಷತ್ ಸದಸ್ಯರಾದ ರಾಮಚಂದ್ರಗೌಡ, ಕೆ.ಬಿ.ಶಾಣಪ್ಪ, ನಿವೃತ್ತ ಐಎಎಸ್ ಅಧಿಕಾರಿಗಳಾದ ಮದನಗೋಪಾಲ, ಸಿ.ಸೋಮಶೇಖರ್, ಜಿ.ಎಸ್.ಹೆಗಡೆ ಹಾಗೂ ರವೀಂದ್ರ ಪೈ ಅವರನ್ನು ರಾಜ್ಯ ಸಮಿತಿಗೆ ನೇಮಕ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News