ಕಳವು ಪ್ರಕರಣ: 21 ಜನರ ಬಂಧನ

Update: 2017-10-04 18:35 GMT

ಬೆಂಗಳೂರು, ಅ.4: ಪ್ರತ್ಯೇಕ ಕಳವು ಪ್ರಕರಣ ಸಂಬಂಧ 21 ಜನರನ್ನು ಬಂಧಿಸಿ, ಕೋಟ್ಯಂತರ ರೂ.ವೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಡುಗೋಡಿ: ಇಲ್ಲಿನ ಕಾಡುಗೋಡಿ ಠಾಣಾ ಪೊಲೀಸರು ಸೇವಕರ ಕಳವು ಪ್ರಕರಣದಲ್ಲಿ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿ 6 ಲಕ್ಷ ರೂ.ವೌಲ್ಯದ ಚಿನ್ನಾಭರಣ, ಮನೆಗೆ ನುಗ್ಗಿ ಕಳವು ಪ್ರಕರಣ ಸಂಬಂಧ ಆಂಧ್ರಮೂಲದ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಿ ಬೈಕ್ ಒಳಗೊಂಡತೆ 6.3 ಲಕ್ಷ ರೂ. ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

11 ಜನರ ಬಂಧನ: ನಗರದ ಕೆಆರ್‌ಪುರ, ಮಾರತ್ತಹಳ್ಳಿ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ 26 ಮನೆಗಳಿಗೆ ಹಗಲು ಮತ್ತು ರಾತ್ರಿ ವೇಳೆ ಮನೆಗಳ ಬೀಗವನ್ನು ಮುರಿದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 11 ಜನರನ್ನು ಬಂಧಿಸಿ 1 ಕೆ.ಜಿ.ಗೂ ಅಧಿಕ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬೈಕ್ ವಶ: ಮನೆ ಮುಂದೆ ನಿಲ್ಲಿಸಿದ್ದ 11 ಬೈಕ್‌ಗಳ ಹ್ಯಾಂಡ್ ಲಾಕ್‌ಗಳನ್ನು ಮುರಿದು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿ 5 ಲಕ್ಷ ರೂ. ವೌಲ್ಯದ 11 ವಾಹನಗಳನ್ನು ಕೆ.ಆರ್.ಪುರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

46 ಮೊಬೈಲ್: ಕೆಆರ್‌ಪುರಂ, ಎಚ್‌ಎಸ್‌ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಅಂಗಡಿಗಳಲ್ಲಿ ನುಗ್ಗಿ ಕಳವು ಮಾಡಿದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ 46 ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಶ್ಲಾಘನೆ: ಕಳವು ಮಾಲುಗಳನ್ನು ವಾರಸುದಾರರಿಗೆ ನೀಡಿದ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಆರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರಿಗೆ ನಗದು ಬಹುಮಾನ ನೀಡಿ ಶ್ಲಾಘಿಸಿದರು. ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ವೈಟ್‌ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ಸೇರಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News