×
Ad

ಮೂವರು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು

Update: 2017-10-07 21:15 IST

ಬೆಂಗಳೂರು, ಅ.7: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸೋರಿಕೆ ಪ್ರಕರಣದ ಆರೋಪಿಗಳಾದ ಶಿವಕುಮಾರ್, ಮಂಜುನಾಥ್, ಸಂತೋಷ್ ಅಗಸಿಮನಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿತು.

2016ರಲ್ಲಿ ನಡೆದ ದ್ವಿತೀಯ ಪಿಯುಸಿ ರಸಾಯನಾಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಸರಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶಿವಕುಮಾರ್ ಸೇರಿ ಮೂವರು ಆರೋಪಿಗಳ ವಿರುದ್ಧ ಮಲ್ಲೇಶ್ವರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದರು. ಹೀಗಾಗಿ, ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಲಯವು ಈ ಮೂವರು ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತು.

ತಲಾ 1 ಲಕ್ಷ ರೂ.ಬಾಂಡ್, ಇಬ್ಬರ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ರಾಜ್ಯ ಬಿಟ್ಟು ತೆರಳಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News