×
Ad

ಝುಬೈರ್ ಹತ್ಯೆ ಪ್ರಕರಣ: ಹಂತಕರ ಪತ್ತೆಗೆ ಮೂರು ತಂಡಗಳ ರಚನೆ

Update: 2017-10-07 21:45 IST

ಉಳ್ಳಾಲ, ಅ. 7: ಮುಕ್ಕಚ್ಚೇರಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಝುಬೈರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ಉಳ್ಳಾಲದ ಮುಕ್ಕಚ್ಚೇರಿ ಮಸೀದಿಯ ಎದುರು ಬುಧವಾರ ಝುಬೈರ್‌ ರನ್ನು ತಂಡವೊಂದು ಕೊಲೆಗೈದು ಪರಾರಿಯಾಗಿತ್ತು. ಬಳಿಕ ಆರೋಪಿಗಳ ಪತ್ತೆಗಾಗಿ ಸಾರ್ವಜನಿಕರಿಂದ ಒತ್ತಡಗಳು ಹೆಚ್ಚುತ್ತಿರುವಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಮೊಬೈಲ್ ನೆಟ್‌ವರ್ಕ್ ತೊಕ್ಕೊಟ್ಟುವರೆಗೆ ಸಿಕ್ಕಿದ್ದು, ಬಳಿಕ ಸ್ವಿಚ್ ಆಫ್ ಆಗಿದ್ದು, ಹಂತಕರು ತೆರಳಿದ ಕಾರಿನ ಆಧಾರದಲ್ಲಿ ಬೆಂಗಳೂರಿನಲ್ಲಿ ಇರುವ ಸಾಧ್ಯತೆಗಳು ಹೆಚ್ಚಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರ ತಂಡ ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲಿ ತನಿಖೆಯನ್ನು ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News