ಮೊದಲ ಟ್ವೆಂಟಿ-20: ಆಸ್ಟ್ರೇಲಿಯ ಬ್ಯಾಟಿಂಗ್‌ಗೆ ಮಳೆ ಅಡ್ಡಿ
Update: 2017-10-07 21:56 IST
ರಾಂಚಿ, ಅ.7: ಭಾರತ ವಿರುದ್ಧ ಶುಕ್ರವಾರ ನಡೆದ ಮೊದಲ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮಳೆಯಿಂದಾಗಿ ಪಂದ್ಯನಿಂತಾಗ ಆಸ್ಟ್ರೇಲಿಯ ತಂಡ 18.4 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತ್ತು.
ಶನಿವಾರ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯದ ಪರ ಆರಂಭಿಕ ಆಟಗಾರ ಆ್ಯರೊನ್ ಫಿಂಚ್(42)ಸರ್ವಾಧಿಕ ರನ್ ಗಳಿಸಿದರು. ಸ್ಟೀವ್ ಸ್ಮಿತ್ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸಿರುವ ಡೇವಿಡ್ ವಾರ್ನರ್ ಕೇವಲ 8 ರನ್ ಗಳಿಸಿದರು. ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್(17)ಹಾಗೂ ಟಿಮ್ ಪೈನ್(17) ಎರಡಂಕೆಯ ಸ್ಕೋರ್ ದಾಖಲಿಸಿದರು.