ಕ್ಷಿಪಣಿ ಕಾರ್ಯಕ್ರಮದ ಬಗ್ಗೆ ಮಾತುಕತೆಗೆ ಸಿದ್ಧ: ಇರಾನ್
Update: 2017-10-07 23:21 IST
ಅಂಕಾರ, ಅ. 7: ತನ್ನ ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮದ ಬಗ್ಗೆ ಉದ್ಭವಿಸಿರುವ ಉದ್ವಿಗ್ನತೆಯನ್ನು ಶಮನಗೊಳಿಸಲು ಮುಂದಾಗಿರುವ ಇರಾನ್, ಕ್ಷಿಪಣಿ ಕಾರ್ಯಕ್ರಮದ ಬಗ್ಗೆ ಮಾತುಕತೆ ನಡೆಸಲು ಸಿದ್ಧವಿದ್ದೇನೆ ಎಂಬ ಸಂದೇಶವನ್ನು ಆರು ಜಾಗತಿಕ ಶಕ್ತ ದೇಶಗಳಿಗೆ ಕಳುಹಿಸಿದೆ.
ಇರಾನ್‌ನ ಪ್ರಕ್ಷೇಪಕ ಕ್ಷಿಪಣಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಆ ದೇಶದೊಂದಿಗೆ ಅಮೆರಿಕ ಮಾಡಿಕೊಂಡಿರುವ ಪರಮಾಣು ಒಪ್ಪಂದದಿಂದ ಹಿಂದೆ ಸರಿಯುವುದಾಗಿ ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತ ಪದೇ ಪದೇ ಎಚ್ಚರ ನೀಡಿರುವುದನ್ನು ಸ್ಮರಿಸಬಹುದಾಗಿದೆ.
ಅದೂ ಅಲ್ಲದೆ, ಪಾಶ್ಚಿಮಾತ್ಯ ದೇಶಗಳೂ ಇರಾನ್‌ನ ಕ್ಷಿಪಣಿ ಕಾರ್ಯಕ್ರಮವನ್ನು ಟೀಕಿಸಿದ್ದವು.