×
Ad

ಅ.10: ಕಾರಂತ ಪ್ರಶಸ್ತಿ ಪ್ರದಾನ

Update: 2017-10-07 23:29 IST

ಮಂಗಳೂರು, ಅ.7: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಡಾ.ಕೆ.ಶಿವರಾಮ ಕಾರಂತ ಹುಟ್ಟುಹಬ್ಬ ಸಮಾರಂಭವು ಅ.10ರಂದು ಸಂಜೆ 4ಕ್ಕೆ ನಗರದ ಪುರಭವನದಲ್ಲಿ ಜರಗಲಿದೆ.

ಮೇಯರ್ ಕವಿತಾ ಸನಿಲ್ ಕಾರ್ಯಕ್ರಮ ಉದ್ಘಾಟಿಸುವರು. ಈ ಸಂದರ್ಭ ಪದ್ಮಶ್ರೀ ಪುರಸ್ಕೃತ ನಾಡೋಜ ಡಾ. ಕೆ.ಎಸ್. ನಿಸಾರ್ ಅಹಮದ್‌ರಿಗೆ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಪ್ರಶಸ್ತಿ ಪ್ರದಾನ ಮಾಡುವರು. ಕರ್ಣಾಟಕ ಬ್ಯಾಂಕ್‌ನ ಅಧ್ಯಕ್ಷ ಪಿ. ಜಯರಾಮ ಭಟ್ ಪುಷ್ಪನಮನ ಸಲ್ಲಿಸಲಿದ್ದು, ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಪ್ರೊ. ಬಿ.ಎ. ವಿವೇಕ ರೈ ಅಭಿನಂದನಾ ಭಾಷಣ ಮಾಡಲಿರುವರು. ಕಾರ್ಪೊರೇಶನ್ ಬ್ಯಾಂಕಿನ ಜನರಲ್ ಮ್ಯಾನೇಜರ್ ಲಕ್ಷ್ಮೀನಾಥ ರೆಡ್ಡಿ ಕಾರಂತ ಚಿತ್ರ ರಚನಾ ಸ್ಪರ್ಧಾ ವಿಜೇತರಿಗೆ ಹಾಗೂ ಸಿಂಡಿಕೇಟ್ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಸತೀಶ್ ಕಾಮತ್ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸುವರು.

ಶಾಸಕರಾದ ಜೆ.ಆರ್.ಲೋಬೊ, ಗಣೇಶ್ ಕಾರ್ಣಿಕ್, ಉದ್ಯಮಿ ಎ.ಜೆ. ಶೆಟ್ಟಿ, ವಿಜಯಾ ಬ್ಯಾಂಕ್‌ನ ಉಪಮಹಾಪ್ರಬಂಧಕ ಸುಧಾಕರ ನಾಯಕ್ ಎ. ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ ಪಾಲ್ಗೊಳ್ಳುವರು.

ಮಲಯಾಳಂ ಸಾಹಿತಿ ರಾಘವನ್ ಬೆಳ್ಳಿಪ್ಪಾಡಿ ಅವರಿಗೆ ಕಲ್ಕೂರ ಸಾಹಿತ್ಯ ಸಿರಿ ಪ್ರಶಸ್ತಿ, ಶಬರಿ ಗಾಣಿಗ ಮತ್ತು ಸವಿತಾ ಕೆ. ಅವರಿಗೆ ಕಲ್ಕೂರ ಯುವ ಪ್ರಶಸ್ತಿ ಹಾಗೂ ಅನನ್ಯಾ ರೈ ಅವರಿಗೆ ಕಲ್ಕೂರ ಬಾಲ ಪ್ರತಿಭಾ ಪುರಸ್ಕಾರ ನೀಡಿ ಗೌರಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News