×
Ad

ಮೈಸೂರ: ಪರಿಸರ ಸಂರಕ್ಷಣೆ ಕುರಿತ ಕಾಲ್ನಡಿಗೆ ಜಾಥಾ

Update: 2017-10-07 23:45 IST

ಮೈಸೂರು,ಅ.7: ಪ್ರಾಕೃತಿಕ ಸಂರಕ್ಷಣೆಗಾಗಿ ಅಂತಾರಾಷ್ಟ್ರೀಯ ಒಕ್ಕೂಟದ 2017ರ ಧ್ಯೇಯೋದ್ದೇಶದಂತೆ ಲಿಸನ್ ಟು ದಿ ಯಂಗ್ ವೈಸ್ ಹಾಗೂ ಯುವಜನರನ್ನು ಪರಿಸರ ಸಂರಕ್ಷಣೆಯ ಬಗೆಗಿನ ಜಾಗೃತಿ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕೆಂಬ  ಉದ್ದೇಶದಿಂದ  ವನ್ಯಜೀವಿ ಸಪ್ತಾಹದ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತ ಕಾಲ್ನಡಿಗೆಯ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಕೋಟೆ ಆಂಜನೇಯ ದೇವಸ್ಥಾನದ ಬಳಿ ಕಾಲ್ನಡಿಗೆಯ ಜಾಥಾಕ್ಕೆ ಜಿಲ್ಲಾಧಿಕಾರಿ ಡಿ.ರಂದೀಪ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ವಿವಿಧ ಶಾಲಾ ವಿದ್ಯಾರ್ಥಿಗಳು ಪ್ರಾಣಿಗಳ ಮುಖವಾಡ ಧರಿಸಿ ತಮ್ಮನ್ನು ರಕ್ಷಿಸಿ, ಬದುಕಲು ಬಿಡಿ ಎಂಬ ಸಂದೇಶವನ್ನಿರಿಸಿ ನಗರದ ಪ್ರಮುಖ ಬೀದಿಗಳಲ್ಲಿ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮೇಯರ್ ಎಂ.ಜೆ.ರವಿಕುಮಾರ್, ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ರವಿಶಂಕರ್ ಮತ್ತಿತರರು ಉಪಸ್ಥಿತರಿದ್ದರು. 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News