ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಹೆಸರು ನೋಂದಾಯಿಸಿಕೊಳ್ಳಲು ಪ್ರತಿನಿಧಿಗಳಿಗೆ ಕೋರಿಕೆ
Update: 2017-10-08 20:45 IST
ಬೆಂಗಳೂರು, ಅ.8: ಮೈಸೂರಿನಲ್ಲಿ ನವೆಂಬರ್ 24ರಿಂದ ಮೂರು ದಿನಗಳ ಕಾಲ ನಡೆಯಲಿರುವ 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿನಿಧಿಯಾಗಿ ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ಅ.10ರಿಂದ ನ.10ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಪ್ರತಿನಿಧಿಗಳು ಜಿಲ್ಲಾ ಕಸಾಪ ಅಧ್ಯಕ್ಷ ಹತ್ತಿರ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕಸಾಪನಲ್ಲಿ 250 ರೂ.ಪ್ರತಿನಿಧಿ ಶುಲ್ಕವನ್ನು ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಅವಧಿ ಮೀರಿ ಬರುವ ಕೋರಿಕೆಗಳು ಹಾಗೂ ಸಮ್ಮೇಳನ ನಡೆಯುವ ಸ್ಥಳದಲ್ಲಿ ಪ್ರತಿನಿಧಿ ನೋಂದಾಯಿಸಲು ಅವಕಾಶ ಇರುವುದಿಲ್ಲ ಎಂದು ಕಸಾಪ ಗೌರವ ಕಾರ್ಯದರ್ಶಿ ರಾಜಶೇಖರ ಹತಗುಂದಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.