ಯತೀಂದ್ರರವರ ಮೇಲೆ ಇಲ್ಲ ಸಲ್ಲದ ಆರೋಪ: ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ
ಮೈಸೂರು, ಅ.8: ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರನ ವಿರುದ್ಧ ರಾಜಕೀಯ ಪ್ರೇರಿತವಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯತೀಂದ್ರ ಸಿದ್ದರಾಮಯ್ಯ ಸ್ನೇಹ ಬಳಗದಿಂದ ಪ್ರತಿಭಟನೆ ನಡೆಸಲಾಯಿತು.
ನ್ಯಾಯಾಲಯದ ಮುಂಭಾಗವಿರುವ ಗಾಂಧಿ ಪ್ರತಿಮೆ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು ವಿರುದ್ಧ ವಿವಿಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಯತೀಂದ್ರ ಸಿದ್ದರಾಮಯ್ಯ ಯುವ ನಾಯಕರಾಗಿದ್ದು ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸೋಲಿನ ಭಯದಿಂದ ಈ ರೀತಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈಶ್ವರಪ್ಪ ಹಾಗೂ ಬಿ.ಜೆ.ಪುಟ್ಟಸ್ವಾಮಿ ಆಧಾರರಹಿತವಾಗಿ ಸುಖಾಸುಮ್ಮನೆ ಆರೋಪ ಮಾಡುವುದು ಖಂಡನೀಯ ಎಂದು ಪ್ರತಿಭಟನಕಾರರು ಕಿಡಿ ಕಾರಿದರು.
ಪ್ರತಿಭಟನೆಯಲ್ಲಿ ಎಪಿಎಂಸಿ ಉಪಾಧ್ಯಕ್ಷ ಬಸವರಾಜು, ನಿರ್ದೇಶಕ ಅನಿಲ್ ಕುಮಾರ್, ತಾಲೂಕು ಪಂಚಾಯತ್ ಸದಸ್ಯ ಮುದ್ದ ರಾಮೇಗೌಡ, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್, ಮೆಲ್ಲಹಳ್ಳಿ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.