×
Ad

ನ.4-5ರಂದು ರಾಜ್ಯಮಟ್ಟದ ವಿಪ್ರ ತಂಡಗಳ ಕ್ರಿಕೆಟ್ ಪಂದ್ಯಾಟ

Update: 2017-10-09 23:57 IST

ಉಡುಪಿ, ಅ.9: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ರಾಜ್ಯಮಟ್ಟದ ಆಯ್ದ ವಿಪ್ರ ತಂಡಗಳ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಉಡುಪಿ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಕ್ರೀಡಾಂಗಣದಲ್ಲಿ ನ.4 ಮತ್ತು 5ರಂದು ಆಯೋಜಿಸಲಾಗಿದೆ.

ಪ್ರಥಮ 1,11,111ರೂ. ಮತ್ತು ದ್ವಿತೀಯ 55,555ರೂ. ನಗದು ಬಹು ಮಾನ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಭಾಗವಹಿಸಿದ ಎಲ್ಲ ತಂಡಗಳಿಗೂ ವಿಶೇಷ ಬಹುಮಾನ, ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ, ಉತ್ತಮ ಬೌಲರ್, ಉತ್ತಮ ದಾಂಡಿಗ, ಉತ್ತಮ ಕ್ಷೇತ್ರ ರಕ್ಷಕ ಪ್ರಶಸ್ತಿಯನ್ನು ನೀಡ ಲಾಗುವುದು. ಪ್ರತಿ ಪಂದ್ಯದಲ್ಲಿಯೂ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಂಡಿಗ ಬಹುಮಾನವನ್ನು ನೀಡಲಾಗುತ್ತದೆ ಎಂದು ಪರಿಷತ್‌ನ ಅಧ್ಯಕ್ಷ ವಿಷ್ಣುಪ್ರಸಾದ್ ಪಾಡಿಗಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪಂದ್ಯಾಟವನ್ನು ನ.4ರಂದು ಬೆಳಗ್ಗೆ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಉದ್ಘಾಟಿಸಲಿರುವರು. ಶಿರೂರು ಶ್ರೀಲಕ್ಷ್ಮಿ ವರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ನ.5ರಂದು ಸಂಜೆ ಸಮಾರೋಪ ಸಮಾರಂಭ ಜರಗಲಿದೆ. ಈ ಸಂದರ್ಭದಲ್ಲಿ ರಾಜ್ಯಮಟ್ಟದ ವಿಪ್ರ ಕ್ರಿಕೆಟ್ ಆಟಗಾರರನ್ನು ಸನ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ-9448911421, 9844425856ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಪರಿಷತ್‌ನ ಉಪಾಧ್ಯಕ್ಷ ಮಟ್ಟು ಲಕ್ಷ್ಮಿನಾರಾಯಣ, ಕಾರ್ಯದರ್ಶಿ ಪ್ರವೀಣ್ ಉಪಾಧ್ಯ, ಮಾಜಿ ಅಧ್ಯಕ್ಷ ಶಶಿಧರ್ ಭಟ್, ಪ್ರಧಾನ ಸಲಹೆಗಾರ ರಂಜನ್ ಕಲ್ಕೂರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News