ಅ.11ರಂದು ಪ್ರತಿಭಟನಾ ಪ್ರದರ್ಶನ
Update: 2017-10-09 23:58 IST
ಉಡುಪಿ, ಅ.9: ಹಿಂದು ಜಾಗರಣಾ ವೇದಿಕೆ- ವಿಶ್ವ ಹಿಂದು ಪರಿಷತ್ ವತಿಯಿಂದ ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನಾ ಪ್ರದರ್ಶನ ಹಾಗೂ ಖಂಡನಾ ಸಭೆ ಯನ್ನು ಅ.11ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಹಮ್ಮಿಕೊಳ್ಳ ಲಾಗಿದೆ ಎಂದು ಬಜರಂಗದಳ ಮಂಗಳೂರು ವಿಭಾಗದ ಸಹ ಸಂಚಾಲಕ ಸುನೀಲ್ ಕೆ.ಆರ್. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಣಿಪಾಲ ಸೇರಿದಂತೆ ಉಡುಪಿ ಜಿಲ್ಲೆಯ ಒಟ್ಟು 28 ಕಡೆಗಳಲ್ಲಿ ಪ್ರತಿಭಟನೆಯನ್ನು ನಡೆಸಲಾಗುವುದು. ಹಿಂದು ಜಾಗರಣಾ ವೇದಿಕೆಯ ಮುಖಂಡ ಜಗದೀಶ್ ಕಾರಂತರ ಮೇಲೆ ಮೊಕದ್ದಮೆ ದಾಖಲಿಸಿ ಬಂಧಿಸಿ ಜೈಲಿಗೆ ಹಾಕಲು ಗೃಹ ಮಂತ್ರಿ ಆದೇಶ ನೀಡಿ ರುವುದು ಸರಕಾರಿ ಪ್ರೇರಿತ ಭಯೋತ್ಪಾದನೆಯಾಗಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಹಿಂಜಾವೇ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ್, ರತ್ನಾಕರ ಕೋಟ, ಪ್ರಕಾಶ್ ಕುಕ್ಕೆಹಳ್ಳಿ, ದಿನೇಶ್ ಮೆಂಡನ್ ಉಪಸ್ಥಿತರಿದ್ದರು.