ಬ್ರಹ್ಮಾವರದಲ್ಲಿ ಕೃಷಿಮೇಳ

Update: 2017-10-10 17:16 GMT

ಉಡುಪಿ, ಅ.10: ಕೃಷಿ ಮತ್ತು ತೋಟಗಾರಿಕಾ ವಿವಿ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಮತ್ತು ಉಳ್ಳಾಲ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಡಿಪ್ಲೋಮ ಕೃಷಿ ಮಹಾ ವಿದ್ಯಾಲಯ ಬ್ರಹ್ಮಾವರ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಬ್ಯಾಂಕ್ ಮಂಗಳೂರು ಹಾಗೂ ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಹಾಲು ಉತ್ಪಾದಕರ ಒಕ್ಕೂಟ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ- 2017 ಅ.14 ಮತ್ತು 15ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನ ಇಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿವಿಯ ಕುಲಪತಿ ಡಾ.ಪಿ.ನಾರಾಯಣಸ್ವಾಮಿ ವಹಿಸುವರು.

 ವಸ್ತುಪ್ರದರ್ಶನವನ್ನು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸುವರು. ಜಲಕೃಷಿಯಲ್ಲಿ ಮೇವು ಬೆಳೆ ಉತ್ಪಾದನಾ ಘಟಕವನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸುವರು. ತಾಂತ್ರಿಕ ಕೈಪಿಡಿಗಳನ್ನು ಬೆಂಗಳೂರು ಕೃಷಿ ತಂತ್ರಜ್ಞಾನ ಅಳವಡಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಶ್ರೀನಾಥ್ ದೀಕ್ಷಿತ್, ಮಣಿಪಾಲದ ಬಿವಿಟಿಯ ಆಡಳಿತ ಟ್ರಸ್ಟಿ ಕೆ.ಎಂ.ಉಡುಪ, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಬಿಡುಗಡೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News