ಉಡುಪಿ: ಕೆಮ್ತೂರು ನಾಟಕ ಪ್ರಶಸ್ತಿ ತುಳು ನಾಟಕ ಸ್ಪರ್ಧೆ

Update: 2017-10-10 17:19 GMT

ಉಡುಪಿ, ಅ.10: ತುಳುರಂಗೂಮಿಯ ಬೆಳವಣಿಗೆಗೆ ಶ್ರಮಿಸಿದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮರಣಾರ್ಥ ತುಳುಕೂಟ ಉಡುಪಿ ನಡೆಸುತ್ತಿರುವ 16ನೇ ವರ್ಷದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆ ಡಿ.21ರಿಂದ ಉಡುಪಿಯಲ್ಲಿ ನಡೆಯಲಿದೆ.

ದೇಶದ ಯಾವುದೇ ಪ್ರದೇಶದಲ್ಲಿರುವ ತುಳು ಹವ್ಯಾಸಿ ನಾಟಕ ತಂಡಗಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಸ್ಪರ್ಧೆಗೆ ಗರಿಷ್ಠ ಏಳು ನಾಟಕ ಗಳನ್ನು ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ರೂ.15,000, ರೂ.10,000, ರೂ. 7,000 ನಗದು ಬಹುಮಾನವಲ್ಲದೇ, ಅತ್ಯುತ್ತಮ ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ ರೂ.1,000 ಮತ್ತು ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವುದು.

ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ ರೂ.5,000 ಹಾಗೂ ಹೊರರಾಜ್ಯದ ತಂಡಗಳಿಗೆ ರೂ.10,000 ಭತ್ಯೆಯೊಂದಿಗೆ ಎಲ್ಲಾ ಸೌಲಭ್ಯ, ಸೌಕರ್ಯಗಳನ್ನು ಒದಗಿಸಲಾಗುವುದು. ಸ್ಪರ್ಧೆಯಲ್ಲಿ ಬಾಗವಹಿಸಲಿಚ್ಛಿಸುವ ಕ್ರಿಯಾಶೀಲ ತುಳು ಹವ್ಯಾಸಿ ರಂಗತಂಡಗಳು ಮುದ್ರಿತ ಪ್ರವೇಶಪತ್ರ ಮತ್ತು ನಿಯಮಾವಳಿಗಳಿಗೆ ಬಿ.ಪ್ರಬಾಕರ ಭಂಡಾರಿ, ಪ್ರಕೃತಿ 5-94ಅ, 76ನೇ ಬಡಗುಬೆಟ್ಟು, ಬೈಲೂರು, ಉಡುಪಿ-576101.

(ಮೊ:9880825626) ಇವರಿಗೆ ಬರೆಯಬಹುದು. ಪ್ರವೇಶ ಪತ್ರಗಳನ್ನು ಸ್ವೀಕರಿಸಲು ನ.5 ಕೊನೆಯ ದಿನವಾಗಿರುತ್ತದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News