ಕ್ಷುಲ್ಲಕ ಕಾರಣಕ್ಕೆ ಓರ್ವನ ಕೊಲೆ
Update: 2017-10-11 19:09 IST
ಬೆಂಗಳೂರು, ಅ.11: ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಲಿಂಗರಾಜಪುರದ ನಿವಾಸಿ ವಿಕ್ರಂ(27) ಕೊಲೆಯಾದ ಪೇಂಟರ್ ಎಂದು ಪೊಲೀಸರು ತಿಳಿಸಿದ್ದಾರೆ.
ವಿಕ್ರಂ ಅವರು ಮಂಗಳವಾರ ರಾತ್ರಿ ಮನೆಗೆ ವಾಪಸ್ ಹೋಗುತ್ತಿದ್ದಾಗ ಲಿಂಗರಾಜಪುರದ ಅಂಚೆ ಕಚೇರಿ ಸಮೀಪದ ಮದ್ಯದಂಗಡಿ ಬಳಿ ದುಷ್ಕರ್ಮಿಗಳು ಅಡ್ಡಗಟ್ಟಿ ಜಗಳವಾಡಿ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಕೆಳಗೆ ಬಿದ್ದ ವಿಕ್ರಂ ಮೇಲೆ ದುಷ್ಕರ್ಮಿಗಳು ಹಾಲೋ ಬ್ಲಾಕ್ ಇಟ್ಟಿಗೆಯನ್ನು ತಲೆ ಮೇಲೆ ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.