ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2017-10-11 21:21 IST
ಭಟ್ಕಳ, ಅ. 11: ಮುರುಡೇಶ್ವರ ಬೈಲೂರು ಕ್ರಾಸ್ ರಾ.ಹೆ.66ರಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳ ದಲ್ಲೇ ಮೃತಪಟ್ಟ ಘಟನೆ ಬುಧವಾರ ಜರಗಿದೆ.
ಮೃತ ಬೈಕ್ ಚಾಲಕನನ್ನು ಹೊನ್ನಾವರ ತಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಬಳಕೂರು ಗ್ರಾಮದ ನಿವಾಸಿ ಗಣೇಶ ಗೋವಿಂದ ನಾಯ್ಕ(26) ಎಂದು ಗುರುತಿಸಲಾಗಿದೆ. ಅವರು ಭಟ್ಕಳ ಕಡೆಯಿಂದ ಹೊನ್ನಾವರ ಕಡೆ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಾಗಿದೆ.
ಮುರುಡೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು ಪ್ರಕರಣ ದಾಖಲಿಸಿದ್ದಾರೆ.