ವಾಹಿನಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ದೂರಿಗೆ ಹೈಕೋರ್ಟ್ ತಡೆ
Update: 2017-10-11 22:48 IST
ಬೆಂಗಳೂರು, ಅ.11: ರಾಜ್ಯಸಭಾ ಚುನಾವಣೆಯಲ್ಲಿ ಮತ ಹಾಕಲು ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಹಣದ ಬೇಡಿಕೆ ಇಟ್ಟಿದ್ದಾರೆ ಎಂಬ ಹಿನ್ನೆಲೆಯಲ್ಲಿ ಚುಟುಕು ಕಾರ್ಯಾಚರಣೆ ನಡೆಸಿದ್ದ ವಾಹಿನಿ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ದೂರಿನ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಈ ಸಂಬಂಧ ಸುದ್ದಿ ವಾಹಿನಿಯ ಸಂಪಾದಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್‌ಕುಮಾರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಶಾಸಕ ಬಿ.ಆರ್.ಪಾಟೀಲ್ ಅವರು ಮಾನನಷ್ಟ ಹಿನ್ನೆಲೆಯಲ್ಲಿ ಅಧೀನ ನ್ಯಾಯಾಲಯದಲ್ಲಿ ದೂರು ದಾಖಲಿಸಬಹುದು. ಆದರೆ, ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ದೂರು ದಾಖಲಿಸಿದ್ದಾರೆ. ಹೀಗಾಗಿ, ತನಿಖೆಗೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ತನಿಖೆಗೆ ತಡೆ ನೀಡಿ ಆದೇಶಿಸಿತು.